ಕೊಪ್ಪಳ: ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಫೆಬ್ರವರಿ 20 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ವಾಕ್ ಇನ್ ಇಂಟರ್ ವ್ಯೂವ್ ಆಯೋಜಿಸಲಾಗಿದೆ.
ಜೆಎಸ್ಡಬ್ಲ್ಯೂ ಸ್ಟೀಲ್ ಲಿಮಿಟೆಡ್ ಸಂಸ್ಥೆಯು ಅಪ್ರೆಂಟಿಸ್ ತರಬೇತಿಗೆ ನೇಮಕ ಮಾಡಿಕೊಳ್ಳಲಿದ್ದು, ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಎಲ್ಲರಿಗೂ ಉಚಿತ ಪ್ರವೇಶವಿದೆ. ಯಾವುದೇ ವೃತ್ತಿಯ ಐ.ಟಿ.ಐ, ಡಿಪ್ಲೊಮಾ ಮೆಕ್ಯಾನಿಕಲ್, ಡಿಪ್ಲೊಮಾ ಇಲೆಕ್ಟ್ರಿಕಲ್, ಡಿಪ್ಲೊಮಾ ಇಲೆಕ್ಟ್ರಾನಿಕ್ಸ್, ಡಿಪ್ಲೊಮಾ ಮೆಟಲರ್ಜಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಈ ನೇರ ಸಂದರ್ಶನಕ್ಕೆ ಹಾಜರಾಗಬಹುದು.
18 ರಿಂದ 25 ವರ್ಷ ವಯೋಮಿತಿಯ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 2 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ (ರೆಜ್ಯುಮ್) ಹಾಗೂ ಪಾಸ್ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಉದ್ಯೋಗಾಕಾಂಕ್ಷಿಗಳು https://forms.gle/dsumj4Yu2QQA15yr7 ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

