HomeJobsಐಟಿಐ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ನೇಮಕಾತಿಗೆ ಮಾ.9ರಂದು ನೇರ ಸಂದರ್ಶನ

ಐಟಿಐ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ನೇಮಕಾತಿಗೆ ಮಾ.9ರಂದು ನೇರ ಸಂದರ್ಶನ

ಕೊಪ್ಪಳ: ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವನ್ನು ಮಾರ್ಚ್ 9 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.

 ಈ ವಾಕ್ ಇನ್ ಇಂಟರ್‌ವ್ಯೂವದಲ್ಲಿ ದಿವ್ಗಿ ಟಾರ್ಕ್ ಟ್ರಾನ್ಸಫರ್, ಶಿರಸಿ, ಉತ್ತರ ಕನ್ನಡ ಜಿಲ್ಲೆ ಸಂಸ್ಥೆಯು ತಮ್ಮಲ್ಲಿ ಖಾಲಿ ಇರುವ ಮಶೀನ್ ಆಪರೇಟರ್ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಿದ್ದಾರೆ. ಆದ್ದರಿಂದ ಐ.ಟಿ.ಐ(ಫಿಟ್ಟರ್), ಐ.ಟಿ.ಐ(ಟರ್ನರ), ಐ.ಟಿ.ಐ(ಮಶಿನಿಷ್ಟ್) ಹಾಗೂ ಬಿಎಸ್‌ಸಿ, ಬಿಕಾಂ, ಬಿಎ ಅಭ್ಯರ್ಥಿಗಳು ಮತ್ತು ಡಿಪ್ಲೊಮಾ ಮೆಕ್ಯಾನಿಕಲ್, ಆಟೋಮೊಬೈಲ್, ಟೂಲ್ & ಡೈಮೆಕಿಂಗ್ ವೃತ್ತಿಗಳಲ್ಲಿ ಪಾಸ್ ಅಥವಾ ಫೇಲ್ ಆದ ಅಭ್ಯರ್ಥಿಗಳು ಹಾಜರಾಗಬಹುದು.

 ಅಲ್ಲದೇ ಜಿಟಿಟಿಸಿ ಕೊಪ್ಪಳ ರವರು ತಮ್ಮಲ್ಲಿ ಖಾಲಿ ಇರುವ ಭೋದಕ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಿದ್ದು, ಡಿಪ್ಲೋಮಾ (ಟೂಲ್ & ಡೈಮೇಕಿಂಗ್), ಬಿಇ(ಇ&ಇ), ಬಿಇ(ಇ&ಸಿ), ಪೋಸ್ಟ ಡಿಪ್ಲೋಮಾ-ಟೂಲ್ & ಡೈಮೇಕಿಂಗ್ ವಿದ್ಯಾರ್ಹತೆಯ ಅಭ್ಯರ್ಥಿಗಳು ಈ ನೇರ ಸಂದರ್ಶನಕ್ಕೆ ಹಾಜರಾಗಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಇದಲ್ಲದೇ ದೆಶಪಾ಼ಂಡೆ ಸ್ಕಿಲ್ಲಿಂಗ್ ರವರು ತಮ್ಮಲ್ಲಿ ಖಾಲಿ ಇರುವ ಇಂಗ್ಲಿಷ್ ಹಾಗೂ ಕಂಪ್ಯೂಟರ್ ಟ್ರೆöÊನರ್ ಹುದ್ದೆಗಳಿಗೆ ಗದಗ ಹಾಗೂ ಕೊಪ್ಪಳ ಜಿಲ್ಲಾದ್ಯಾಂತ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳುತ್ತಿದ್ದು, ಕೆಲಸದ ಅನುಭವ ಇದ್ದವರಿಗೆ ಆದ್ಯತೆ ಇರುತ್ತದೆ. ಅರ್ಹ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸ ಹೊಂದಿದ ಅಭ್ಯರ್ಥಿಗಳು ಈ ನೇರ ಸಂದರ್ಶನಕ್ಕೆ ಹಾಜರಾಗಬಹುದು.

 ಆಸಕ್ತ 18 ರಿಂದ 34 ವರ್ಷ ನಿರುದ್ಯೋಗಿ ಪುರಷರು ಹಾಗೂ ಮಹಿಳೆಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 2 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರೆಜೂಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಉದ್ಯೋಗಾಕಾಂಕ್ಷಿಗಳು https://forms.gle/bYm5KEikfXAVCP2E7 ಮೂಲಕವು ರಿಜಿಸ್ಟರ್ ಮಾಡಿಕೊಳ್ಳಬಹುದು.

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular