HomeLatest NewsSSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ವಿವಿಧೆಡೆ ಉದ್ಯೋಗಾವಕಾಶ

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ವಿವಿಧೆಡೆ ಉದ್ಯೋಗಾವಕಾಶ

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ 16 ರಂದು ಬೆಳಗ್ಗೆ 10.30 ಯಿಂದ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಪೆಂಟಾಟೆಕ್, ಮಡಿಕೇರಿ, ಇಬ್ಬನಿ ರೆಸಾರ್ಟ್ಸ್, ಮಡಿಕೇರಿ ಹಾಗೂ ಕ್ಲಬ್ ಮಹೀಂದ್ರ ರೆಸಾರ್ಟ್ಸ್, ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣ ಪತ್ರ(ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್-8296020826 ನ್ನು ಸಂಪರ್ಕಿಸಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular