ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್-ಇಂಟರ್ವ್ಯೂವ್ ಅನ್ನು ಆಗಸ್ಟ್ 14 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೊಪ್ಪಳ ಜಿಲ್ಲಾ ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪಿ.ಯು.ಸಿ ಐಟಿಐ ಡಿಪ್ಲೋಮಾ, ಬಿಇ, ಬಿ.ಎಸ್.ಸಿ ಅಥವಾ ಎಂ.ಎಸ್.ಸಿ – ಕೆಮಿಸ್ಟ್ರಿ ಬೋಧನಾ ಕ್ಷೇತ್ರದಲ್ಲಿ ಆಸಕ್ತಿವುಳ್ಳವರು ಈ ವಾಕ್ ಇನ್ ಇಂಟರ್ವ್ಯೂವ್ ನಲ್ಲಿ ಭಾಗವಹಿಸಬಹುದು. 18 ರಿಂದ 26 ವರ್ಷದ ಅರ್ಹ ನಿರುದ್ಯೋಗಿ ಯುವಕರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರೆಜ್ಯುಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್ವ್ಯೂವ್ ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಉದ್ಯೋಗಾಕಾಂಕ್ಷಿಗಳು https://forms.gle/yzUzvPfN3wfsXXLg8 ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

