HomeKarnatakaನಿವೇಶನ, ವಸತಿ ರಹಿತರಿಗೆ ಗುಡ್ ನ್ಯೂಸ್: ಹಿರಿಯರು, ಮಹಿಳೆಯರು, ಕಾರ್ಮಿಕರು ಸೇರಿ ವಿವಿಧ ವರ್ಗದವರಿಗೆ ಸೌಲಭ್ಯ

ನಿವೇಶನ, ವಸತಿ ರಹಿತರಿಗೆ ಗುಡ್ ನ್ಯೂಸ್: ಹಿರಿಯರು, ಮಹಿಳೆಯರು, ಕಾರ್ಮಿಕರು ಸೇರಿ ವಿವಿಧ ವರ್ಗದವರಿಗೆ ಸೌಲಭ್ಯ

ದಾವಣಗೆರೆ: 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಮಲೇಬೆನ್ನೂರು ಪುರಸಭೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು  ಅಗತ್ಯ ದಾಖಲೆಗಳೊಂದಿಗೆ ಅ.ರ್ಜಿ ಸಲ್ಲಿಸಬಹುದು.

ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ಮಲೇಬೆನ್ನೂರು ಪುರಸಭೆ ಮುಖ್ಯಾಧಿಕಾರಿ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular