HomeKarnatakaವಸತಿ, ನಿವೇಶನ ಇಲ್ಲದವರಿಗೆ ಗುಡ್ ನ್ಯೂಸ್: ಸೈಟ್ ನೀಡಲು ಅರ್ಜಿ ಆಹ್ವಾನ

ವಸತಿ, ನಿವೇಶನ ಇಲ್ಲದವರಿಗೆ ಗುಡ್ ನ್ಯೂಸ್: ಸೈಟ್ ನೀಡಲು ಅರ್ಜಿ ಆಹ್ವಾನ

ಚಿತ್ರದುರ್ಗ: ಹೊಸದುರ್ಗ ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ, ವಸತಿ ರಹಿತರಾಗಿರುವ ಸಾರ್ವಜನಿಕರಿಗೆ ನಿವೇಶನ ಹಂಚಿಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಏಪ್ರಿಲ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ 

ಗೊರವಿನಕಲ್ಲು ರಿ.ಸ.ನಂ. 86ರಲ್ಲಿ ನಿವೇಶನ, ವಸತಿ ರಹಿತರಿಗೆ ನಿವೇಶನಗಳನ್ನು ಹಂಚಿಕೆ ಮಾಡಲು 2026ರ ಮಾರ್ಚ್ 13 ರಂದು ನಡೆದ ಆಶ್ರಯ ಸಮಿತಿ ಸಭೆಯ ತೀರ್ಮಾನದಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ಅರ್ಹ ಫಲಾನುಭವಿಗಳು ಹೊಸದುರ್ಗ ಪುರಸಭೆ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಗಳನ್ನು ಪಡೆದುಕೊಂಡು ಏಪ್ರಿಲ್ 30 ರೊಳಗಾಗಿ ಸಲ್ಲಿಸಬೇಕು.

ಅರ್ಜಿಯೊಂದಿಗೆ ಗಂಡ, ಹೆಂಡತಿ ಮತ್ತು ಮಕ್ಕಳ ಆಧಾರ್ ಕಾರ್ಡ್, ಇತ್ತೀಚಿನ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ಬ್ಯಾಂಕ್ ಪಾಸ್ ಬುಕ್ ನಕಲು ಪ್ರತಿಗಳನ್ನು ಲಗತ್ತಿಸುವುದು ಕಡ್ಡಾಯವಾಗಿದೆ. ಇದರೊಂದಿಗೆ ದೇಶದ ಯಾವುದೇ ಭಾಗದಲ್ಲಿ ಸ್ವಂತ ನಿವೇಶನ, ಮನೆ ಹೊಂದಿಲ್ಲವೆಂದು 20 ರೂಪಾಯಿ ಛಾಪಾ ಕಾಗದಲ್ಲಿ ನೋಟರಿ ಮಾಡಿಸಿದ ಸ್ವಯಂ ದೃಢೀಕರಣ ಪತ್ರವನ್ನು ಸಲ್ಲಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಗದಿತ ಅವಧಿ ಮುಗಿದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಹೊಸದುರ್ಗ ಪುರಸಭಾ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular