BIG NEWS : ರಾಜ್ಯ ಸರ್ಕಾರದಿಂದ ‘ತೊಗರಿ’ ಬೆಳೆಗಾರರಿಗೆ ಗುಡ್ ನ್ಯೂಸ್ : ಹೆಚ್ಚುವರಿ 450 ರೂ. ಬೆಂಬಲ ಬೆಲೆ ನಿಗದಿ

ಬೆಂಗಳೂರು: ತೊಗರಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕೇಂದ್ರ ಸರ್ಕಾರದ ನಿಗದಿತ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ಬೋನಸ್ 450 ರೂ.ಗಳ ಸಹಾಯಧನ ನೀಡಲಿದೆ.ಹೌದು, ಸಹಾಯಧನ ನೀಡಲು ಇದೀಗ ಆರ್ಥಿಕ ಇಲಾಖೆಯ ಅನುಮೋದನೆ ದೊರೆತಿದೆ.

ರೈತಬಾಂಧವರು ತಮ್ಮ ಹತ್ತಿರದ PACS / FPO / TAPCMS ಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸುದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ.

ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಲಾಯಿತು. 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಉತ್ಪನ್ನಕ್ಕೆ ಪ್ರತಿ ಕ್ವಿಂಟಾಲ್‌ಗೆ ರೂ.7,550/-ಗಳ ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಕ್ವಿಂಟಾಲ್‌ಗೆ ರೂ.450/ ಗಳ ಪ್ರೋತ್ಸಾಹಧನವನ್ನು ನೀಡಲು ಹಾಗೂ ಇದಕ್ಕಾಗಿ ಅವಶ್ಯವಿರುವ ಅನುದಾನವನ್ನು ಆವರ್ತ ನಿಧಿಯಲ್ಲಿ ಲಭ್ಯವಿರುವ ಮೊತ್ತದಿಂದ ಭರಿಸಲು ಆರ್ಥಿಕ ಇಲಾಖೆಯು ಸಹಮತಿಸಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read