‘ಪ್ರವಾಸಿಗರಿಗೆ’ ಗುಡ್ ನ್ಯೂಸ್ : ರಾತ್ರಿ 9 ಗಂಟೆವರೆಗೂ ‘ಮೈಸೂರು ಅರಮನೆ’ ಭೇಟಿಗೆ ಅವಕಾಶ ನೀಡಲು ಚಿಂತನೆ

ಮೈಸೂರು : ಮೈಸೂರಿಗೆ ಬರುವ ಪ್ರವಾಸಿಗರಿಗೆ’ ಗುಡ್ ನ್ಯೂಸ್ , ರಾತ್ರಿ 9 ಗಂಟೆವರೆಗೂ ‘ಮೈಸೂರು ಅರಮನೆ’ ಭೇಟಿಗೆ ಅವಕಾಶ ನೀಡಲು ಚಿಂತನೆ ನಡೆಸಲಾಗಿದೆ.

ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡುವ ಸಲುವಾಗಿ ವರ್ಷದ 26 ವೀಕೆಂಡ್ ಗಳಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಹಿಂದೆ ಮೈಸೂರು ಅರಮನೆಗೆ ಸಂಜೆ 6 ಗಂಟೆಯ ನಂತರ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿತ್ತು, ಇದೀಗ ರಾತ್ರಿ 9 ಗಂಟೆವರೆಗೂ ಪ್ರವಾಸಿಗರಿಗೆ ಅರಮನೆಗೆ ಭೇಟಿ ನೀಡಲು ಅವಕಾಶ ನೀಡಲು ಸರ್ಕಾರ ಮುಂದಾಗಿದೆ.

ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಪ್ರವಾಸಿಗರನ್ನು ಸೆಳೆಯಲು ಅರಮನೆ ಮೈದಾನದಲ್ಲಿ ಮಾಗಿ ಹಬ್ಬ ಆಚರಿಸಲಾಗುತ್ತಿದ್ದು, ವೀಕೆಂಡ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮೈಸೂರಿನತ್ತ ಆಗಮಿಸುತ್ತಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read