HomeLatest Newsಪ್ರವಾಸಿಗರಿಗೆ ಗುಡ್ ನ್ಯೂಸ್: ಕುದುರೆಮುಖ, ಕೊಡಚಾದ್ರಿ ಚಾರಣಕ್ಕೆ ಅವಕಾಶ

ಪ್ರವಾಸಿಗರಿಗೆ ಗುಡ್ ನ್ಯೂಸ್: ಕುದುರೆಮುಖ, ಕೊಡಚಾದ್ರಿ ಚಾರಣಕ್ಕೆ ಅವಕಾಶ

ಕುದುರೆಮುಖ ವನ್ಯಜೀವಿ ವಿಭಾಗದ ವಿವಿಧ ಚಾರಣ ಪಥಗಳಲ್ಲಿ ಮೇ 1ರಿಂದ ಅನ್ವಯವಾಗುವಂತೆ ಚಾರಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಪಥಗಳಾದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹ ಪರ್ವತ, ಹಿಡ್ಲುಮನೆ ಫಾಲ್ಸ್, ಕೊಡಚಾದ್ರಿ ಚಾರಣವನ್ನು ಬೇಸಿಗೆ ಬೆಂಕಿ ಕಾಲದ ಕಾರಣದಿಂದ ನಿರ್ಬಂಧಿಸಲಾಗಿತ್ತು. ಪ್ರಸ್ತುತ ಎಲ್ಲಾ ಅರಣ್ಯ ಪ್ರದೇಶಗಳಲ್ಲಿ ಸಾಕಷ್ಟು ಮಳೆಯಾಗಿರುವುದರಿಂದ ಮೇ 1ರಿಂದ ಅನ್ವಯವಾಗುವಂತೆ ಚಾರಣಕ್ಕೆ ಅವಕಾಶ ಕಲ್ಪಿಸಲಾಗಿದೆ.

aranyavihara.karnataka.gov.in ಮೂಲಕ ಪ್ರವಾಸಿಗರು ಟಿಕೆಟ್ ಕಾಯ್ದಿರಿಸಬಹುದಾಗಿದೆ ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular