HomeKarnatakaವರ್ಗಾವಣೆಗೊಂಡ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಕರ್ತವ್ಯದಿಂದ ಬಿಡುಗಡೆ ಮಾಡಿ `ಶಿಕ್ಷಣ ಇಲಾಖೆ' ಆದೇಶ

ವರ್ಗಾವಣೆಗೊಂಡ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಕರ್ತವ್ಯದಿಂದ ಬಿಡುಗಡೆ ಮಾಡಿ `ಶಿಕ್ಷಣ ಇಲಾಖೆ’ ಆದೇಶ

ಬೆಂಗಳೂರು : ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ವರ್ಗಾವಣೆಗೊಂಡಿರುವ ಎಲ್ಲ ಶಿಕ್ಷಕರನ್ನು ಕೂಡಲೇ ಬಿಡುಗಡೆ ಮಾಡಲು ಎಲ್ಲಾ ಜಿಲ್ಲಾ ಉಪನಿರ್ದೇಶಕರು ಮತ್ತು ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದೆ.

ರಾಜ್ಯದ ಸರ್ಕಾರಿ ಪ್ರಾಥಮಿಕ/ಪ್ರೌಢ ಶಾಲೆಗಳಲ್ಲಿ ವರ್ಗಾವಣೆಯಿಂದ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ಉಲ್ಲೇಖ-1 ರ ಸರ್ಕಾರದ ಆದೇಶದಂತೆ ಒಟ್ಟು 43000 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಅದರಂತ ಉಲ್ಲೇಖ-2 ಮತ್ತು 3 ರಲ್ಲಿ ಜಿಲ್ಲಾವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಿ ಸೂಚನೆಗಳನ್ನು ನೀಡಲಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪುಸ್ತುತ ಉಲ್ಲೇಖ 04 & 05 ರಲ್ಲಿನ ಸೂಚನೆಯಂತೆ ಸರ್ಕಾರಿ ಪ್ರಾಥಮಿಕ /ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆಯಿಂದ ತೆರವಾದ ಶಿಕ್ಷಕರ ಖಾಲಿ ಹುದ್ದೆಗೆ ತಕ್ಷಣ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡು, ಕೂಡಲೇ ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಂಡ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲು ಸೂಚಿಸಿದ. ಈ ಸಂಬಂಧ ಯಾವುದೇ ದೂರುಗಳು ಸ್ವೀಕೃತವಾದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular