HomeKarnatakaGOOD NEWS : ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ..!

GOOD NEWS : ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ..!

ಬೆಂಗಳೂರು :  ಬೆಂಗಳೂರಿನಲ್ಲಿ  ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಕುರಿತು ಅಧಿಕಾರಿಗಳ ಜತೆ ಚರ್ಚೆ ಮಾಡುವುದಾಗಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಗುರುವಾರ ಪ್ರಾಥಮಿಕ ಹಂತದ ಚರ್ಚೆ ನಡೆಸಿದೆ ಎಂದು ಹೇಳಿದರು.

ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್. ಮಂಜುಳಾ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ಸಿ.ಸತೀಶ, ಕಾರ್ಯನಿರ್ವಾಹಕ ನಿರ್ದೇಶಕರಾದ ಡಿ.ಪಿ.ಪ್ರಕಾಶ ಮತ್ತಿತರರು ಭಾಗವಹಿಸಿದ್ದರು. ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಸಾಧ್ಯಾಸಾಧ್ಯತೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular