HomeKarnatakaನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : CCTV, ಸ್ಮೋಕ್ ಡಿಟೆಕ್ಟರ್ ಅಳವಡಿಕೆ ತರಬೇತಿಗೆ ಅರ್ಜಿ ಆಹ್ವಾನ

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : CCTV, ಸ್ಮೋಕ್ ಡಿಟೆಕ್ಟರ್ ಅಳವಡಿಕೆ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಉಚಿತವಾಗಿ ನಡೆಸುವ 13 ದಿನಗಳ ಸಿಸಿ.ಟಿ.ವಿ ಮತ್ತು ಸ್ಮೋಕ್ ಡಿಟೆಕ್ಟರ್ ಅಳವಡಿಕೆ ತರಬೇತಿ ಕಾರ್ಯಕ್ರಮವು ನವೆಂಬರ್ 19 ರಿಂದ ಡಿಸೆಂಬರ್ 02 ವರೆಗೂ ನಡೆಯಲಿದ್ದು, ಕರ್ನಾಟಕ ರಾಜ್ಯದಲ್ಲಿನ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾμÉ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಸಂಪೂರ್ಣವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣ ಪತ್ರ ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ 8105526792, 9241482541 ನ್ನು ಸಂಪರ್ಕಿಸಬಹುದು ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular