ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ‘ಹೋಟೆಲ್ ಮ್ಯಾನೇಜ್ ಮೆಂಟ್’ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶದ ಆಸಕ್ತ ನಿರುದ್ಯೋಗ ಯುವಕ, ಯುವತಿಯರಿಗೆ ಹೋಟೆಲ್ ಮ್ಯಾನೇಜ್‍ಮೆಂಟ್ ತರಬೇತಿ ಹಮ್ಮಿಕೊಳ್ಳಲಾಗಿದೆ. ಆಸಕ್ತರು ನೋಂದಣಿ ಮಾಡಿಕೊಳ್ಳಬಹುದು.

ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದ ಹೌಸ್‍ಕೀಪಿಂಗ್ ಅಟೆಂಡೆಂಟ್, ಫುಡ್ ಮತ್ತು ಬೆವರೇಜ್ ಸರ್ವೀಸ್-ಸ್ಟೆವಾರ್ಡ್ ಜಾಬ್ ರೋಲ್‍ಗಳಲ್ಲಿ 45 ದಿನಗಳ ಸೂಕ್ತ ತರಬೇತಿಯನ್ನು ನೀಡಿ ಉದ್ಯೋಗಾವಕಾಶ ಕಲ್ಪಿಸಲು ಉದ್ದೇಶಿಸಲಾಗಿದೆ.

ತರಬೇತಿ ಅವಧಿಯಲ್ಲಿ ಬಳ್ಳಾರಿ ನಗರ ಹಾಗೂ ಜಿಲ್ಲೆಯ ಗ್ರಾಮೀಣ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಕಲ್ಪಿಸಲಾಗುವುದು. ತರಬೇತಿ ಪೂರ್ಣಗೊಳಿಸಿದ ನಂತರ ಪ್ರಮಾಣ ಪತ್ರವನ್ನು ನೀಡಲಾಗುವುದು. ತರಬೇತಿಯನ್ನು ಯಶ್ವಸಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲಾಗುವುದು.

*ಅರ್ಹತೆಗಳು

ಅಭ್ಯರ್ಥಿಗಳು ಬಳ್ಳಾರಿ ಜಿಲ್ಲೆಯ ನಿವಾಸಿಯಾಗಿರಬೇಕು. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪಡೆದಿರಬೇಕು. ವಯೋಮಿತಿ 18 ರಿಂದ 30 ವರ್ಷದ ಒಳಗಿರಬೇಕು. ಅಭ್ಯರ್ಥಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಮತ್ತು ಸಾಮಾನ್ಯ ವರ್ಗಕ್ಕೆ ಸೇರಿದವರಾಗಿರಬೇಕು.  ಕಡ್ಡಾಯವಾಗಿ 45 ದಿನಗಳ ತರಬೇತಿಯನ್ನು ಪಡೆಯಬೇಕು.

ಮಾ.04 ರಂದು ತರಬೇತಿಯ ಉದ್ಘಾಟನೆ ಕಾರ್ಯಕ್ರಮ

ತರಬೇತಿಯ ಉದ್ಘಾಟನೆಯ ಕಾರ್ಯಕ್ರಮವು ಮಾ.04 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಉದ್ಘಾಟನೆ ಮಾಡುವರು.ತರಬೇತಿಯ ತರಗತಿಗಳು ಅದೇ ದಿನ ಪ್ರಾರಂಭವಾಗುತ್ತದೆ. ಈ ಕೋರ್ಸ್‍ಗಳಿಗೆ ಯಾವುದೇ ರೀತಿ ಶುಲ್ಕ ಇರುವುದಿಲ್ಲ. ಈ ತರಬೇತಿಯನ್ನು ಉಚಿತವಾಗಿ 45 ದಿನಗಳ ತರಬೇತಿ ಕೊಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಥವಾ ದೂ.08392-294777, ಮೊ.8861788707, ಸಂಪರ್ಕಿಬಹುದು ಎಂದು ಪ್ರಕಟಣೆ ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read