HomeKarnatakaನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನಲ್ಲಿ 'ಅಣಬೆ ಬೇಸಾಯ' ತರಬೇತಿಗೆ ಅರ್ಜಿ ಆಹ್ವಾನ

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನಲ್ಲಿ ‘ಅಣಬೆ ಬೇಸಾಯ’ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ಇಲ್ಲಿ ದಿನಾಂಕ ಸೆಪ್ಟೆಂಬರ್ 13 2024 ರಂದು “ಅಣಬೆ ಬೇಸಾಯ” (Production Technology of Mushroom) ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನಗರವಾಸಿಗಳಿಗೆ, ರೈತರಿಗೆ, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಒಂದು ದಿನದ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ರೂ. 250/- ಗಳನ್ನು ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ರವರ ಕಚೇರಿಯಲ್ಲಿ ತರಬೇತಿಯ ದಿನ ಪಾವತಿಸಿ ನೊಂದಣಿಯನ್ನು ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9449833153, 9066764248, 7892618755 ಅಥವಾ ಇ-ಮೇಲ್ [email protected], [email protected] ಮೂಲಕ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular