ಬೆಂಗಳೂರು ನಗರ ಜಿಲ್ಲೆ : ತೋಟಗಾರಿಕೆ ಇಲಾಖೆ ವತಿಯಿಂದ, ಜೈವಿಕ ಕೇಂದ್ರ, ಹುಳಿಮಾವು, ಬನ್ನೇರುಘಟ್ಟ ರಸ್ತೆ ಬೆಂಗಳೂರು ಇಲ್ಲಿ ಸೆಪ್ಟೆಂಬರ್ 27 ರಂದು “ಅಣಬೆ ಬೇಸಾಯ” (Production technology of mushroom) ಬಗ್ಗೆ ನಗರವಾಸಿಗಳಿಗೆ, ರೈತರಿಗೆ, ಸಾರ್ವನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ತರಬೇತಿಯಲ್ಲಿ ಭಾಗವಹಿಸಲು ಇಚ್ಚಿಸುವವರು ರೂ. 250 ಗಳನ್ನು ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ರವರ ಕಚೇರಿಯಲ್ಲಿ ತರಬೇತಿಯ ದಿನದಂದು ಪಾವತಿಸಿ ನೋಂದಣಿಯನ್ನು ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9449833153, 9066764248, 9399813893 ಅಥವಾ ಇ-ಮೇಲ್: [email protected] ಅಥವಾ [email protected] ಮೂಲಕ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.