ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 3,935 ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ, 14,500 ಉದ್ಯೋಗ ಸೃಷ್ಟಿ

ಬೆಂಗಳೂರು :  ರಾಜ್ಯದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿದ್ದು, ಹೂಡಿಕೆ ಮಾಡುವಂತೆ ಕಂಪನಿಗಳನ್ನು ಸೆಳೆಯಲಾಗುತ್ತಿದೆ. ಈ ಸಂಬಂಧ ಶುಕ್ರವಾರ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ ನಡೆಸಿ, 73 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಸುಮಾರು ₹ 3,935 ಕೋಟಿ ಬಂಡವಾಳ ಹೂಡಿಕೆಯಾಗಿ, ಅಂದಾಜು  14,500 ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆನಡೆಸಿದೆ. 73 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು ₹ 3,935 ಕೋಟಿ ಬಂಡವಾಳ ಹೂಡಿಕೆಯಾಗಲಿದೆ. ಸುಮಾರು 14,500 ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ತಿಳಿಸಿದ್ದಾರೆ.

ETL ಸೆಕ್ಯೂರ್ ಸ್ಪೇಸ್ ಲಿ., DhaSH ಪಿ.ವಿ. ಟೆಕ್ನಾಲಜಿಸ್ ,  ಮೈಲಾರ್ ಇನ್ ಫ್ರಾ, ಸೇರಿದಂತೆ ಹಲವು ಕಂಪೆನಿಗಳು ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ,  ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉದ್ಯಮಗಳು ಸ್ಥಾಪನೆಯಾಗಲಿದೆ ಎಂದು ಹೇಳಿದ್ದಾರೆ.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಯವರಾದ ಡಾ. ಸೆಲ್ವಕುಮಾರ್, ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ, #KIADB ವ್ಯವಸ್ಥಾಪಕ ನಿರ್ದೇಶಕರಾದ ಡಾ. ಮಹೇಶ್ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read