ಕೌಶಾಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖಯವರು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ದಲ್ಲಿ 2025-26 ನೇ ಸಾಲಿನ ಎಐಟಿಟಿ- ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ಐಟಿಐ /ಡಿಪ್ಲೋಮಾ/ಬಿ.ಇ. ವಿದ್ಯಾರ್ಹತೆಯುಳ್ಳವರಿಗೆ 4 ತಿಂಗಳ ಸಿ.ಎನ್.ಸಿ. ಆಪರೇಟರ್-ವರ್ಟಿಕಲ್ ಮಷಿನ್ನಿಂಗ್ ಸೆಂಟರ್/ ಸಿ.ಎನ್.ಸಿ.ಪ್ರೋಗ್ರಾಮರ್/ ಪ್ರೋ.ಇ./ ಆಟೋ ಕ್ಯಾಡ್ ಹಾಗೂ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆಯುಳ್ಳವರಿಗೆ 12 ತಿಂಗಳ ಟೂಲ್ ರೂಮ್ ಮಷಿನಿಸ್ಟ್ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತರಬೇತಿ ಅವಧಿಯಲ್ಲಿ ರೂ. 2500/- ಗಳ ಶಿಷ್ಯವೇತನ ನೀಡಲಾಗುವುದು. ಆಸಕ್ತರು ಅರ್ಜಿ ನಮೂನೆಯನ್ನು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಪ್ಲಾಟ್ ನಂ. ಸಿಎ-38, ನಿದಿಗೆ ಕೈಗಾರಿಕಾ ಪ್ರದೇಶ, ಮಾಚೇನಹಳ್ಳಿ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸುವಂತೆ ಘಟಕ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಘಟಕ ಮುಖ್ಯಸ್ಥರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ನಿಧಿಗೆ ಕೈಗಾರಿಕಾ ಪ್ರದೇಶ, ಮಾಚೇನಹಳ್ಳಿ ದೂ; 08182-246054/ 9448307027/ 9449286543 ಗಳನ್ನು ಸಂಪರ್ಕಿಸುವುದು.