HomeKarnatakaSC ನಿರುದ್ಯೋಗಿ ಪದವೀಧರರಿಗೆ ಗುಡ್ ನ್ಯೂಸ್..! ಎಲೆಕ್ಟ್ರಾನಿಕ್ಸ್-ಡಿಜಿಟಲ್ ಉದ್ಯಮಕ್ಕೆ ಸರ್ಕಾರದಿಂದ ಸಹಾಯಧನ

SC ನಿರುದ್ಯೋಗಿ ಪದವೀಧರರಿಗೆ ಗುಡ್ ನ್ಯೂಸ್..! ಎಲೆಕ್ಟ್ರಾನಿಕ್ಸ್-ಡಿಜಿಟಲ್ ಉದ್ಯಮಕ್ಕೆ ಸರ್ಕಾರದಿಂದ ಸಹಾಯಧನ

ಪ್ರಸಕ್ತ (2026-27) ಸಾಲಿಗೆ ಪದವಿ ಪಡೆದ ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ ಮತ್ತು ಯುವತಿಯರು ಎಲೆಕ್ಟ್ರಾನಿಕ್ಸ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಉದ್ದಿಮೆ ಸ್ಥಾಪಿಸಲು ಸಹಾಯಧನ ಮಂಜೂರು ಮಾಡಲು ಆಪ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ, 31 ಕೊನೆಯ ದಿನವಾಗಿದೆ. ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿಬೇಕು. ಅರ್ಜಿದಾರರು ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿದಾರರು ಕನಿಷ್ಠ 10 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಜಿದಾರರು ಕನಿಷ್ಠ 30 ವರ್ಷದಿಂದ ಗರಿಷ್ಟ 60 ವರ್ಷದವರಾಗಿರತಕ್ಕದ್ದು. ಅರ್ಜಿದಾರರ ವಾರ್ಷಿಕ ಆದಾಯ ರೂ. 10 ಲಕ್ಷ ಗಳ ಒಳಗಿರಬೇಕು. ಅರ್ಜಿದಾರರು ಕರ್ನಾಟಕ ನಿವಾಸಿಯಾಗಿರುವ ಬಗ್ಗೆ ವಾಸಸ್ಥಳ ದೃಢೀಕರಣ ಸಲ್ಲಿಸಬೇಕು (15 ವರ್ಷಗಳಿಂದ ವಾಸವಿರಬೇಕು). ಯುಎಎಂ/ಎಂಎಸ್‍ಎಂಇ (ಉದ್ಯೋಗ ಆಧಾರ್ ಮೆಮೋರಂಡಮ್) ಪ್ರಮಾಣ ಪತ್ರ ಸಲ್ಲಿಸತಕ್ಕದ್ದು.

ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಯಾವುದೇ ನಿಗಮ/ಮಂಡಳಿಗಳಿಂದ ಅರ್ಜಿದಾರರು ಯಾವುದೇ ಸೌಲಭ್ಯ ಪಡೆಯದಿರುವ ಬಗ್ಗೆ ಅಫಿಡವಿಟ್/ಧೃಢೀಕರಣ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರದ ಎ ಅಥವಾ ಬಿ ವೃಂದದ ಹುದ್ದೆಯನ್ನು ಪಡೆಯದಿರುವ ಬಗ್ಗೆ ಅಫಿಡವಿಟ್/ ಧೃಢೀಕರಣ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು. ಸಫಾಯಿ ಕರ್ಮಚಾರಿಗಳ ಮಕ್ಕಳು/ಅಲೆಮಾರಿ ಜನಾಂಗದ ಮಕ್ಕಳು ಇದ್ದಲ್ಲಿ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು. ಕಚೇರಿ ಸ್ಥಾಪಿಸುವ ಮಹಾನಗರ ಪಾಲಿಕೆಯ ವಿವರ ಸಲ್ಲಿಸತಕ್ಕದ್ದು (ಅರ್ಜಿದಾರರು ಎಲ್ಲೇ ವಾಸವಿದ್ದರೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿಯೇ ಕಛೇರಿ ಸ್ಥಾಪಿಸಬೇಕು).

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಲ್ಲಿಸಬೇಕಾದ ದಾಖಲಾತಿಗಳು. ಅರ್ಜಿ ನಮೂನೆ (ದೃಢೀಕರಣ), ವ್ಯಾಸಂಗ ಮಾಡಿದ ಕಾಲೇಜುಗಳಿಂದ ದೃಢೀಕರಿಸಿದ ಅಂಕಪಟ್ಟಿ (ದೃಢೀಕರಣ), ಜಾತಿ ದೃಢೀಕರಣ ಪ್ರಮಾಣ ಪತ್ರ (ದೃಢೀಕರಣ), ಅಭ್ಯರ್ಥಿ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ. (ದೃಢೀಕರಣ), ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ. (ದೃಢೀಕರಣ)

ವಿಶೇಷ ಸೂಚನೆ: ನಮೂನೆಯಲ್ಲಿ ತಿಳಿಸಿರುವಂತಹ ಅಗತ್ಯ ದಾಖಲಾತಿಗಳನ್ನು ಲಗತ್ತಿಸದೇ ಇರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ-08272-225531, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ 08272-223552, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ 08276-281115, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ 08274-249476 ನ್ನು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಕೆಪಿಎಸ್ಸಿ ಮತ್ತು ಕೆಇಎ ಪರೀಕ್ಷೆಗಳಿಗೆ ತರಬೇತಿ

ಮಡಿಕೇರಿ : ಕರ್ನಾಟಕ ಸರ್ಕಾರವು ಕರ್ನಾಟಕ ಲೋಕ ಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲಿರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಆಸಕ್ತರು ಜುಲೈ, 21 ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲ ಸಚಿವರಾದ ಪ್ರೊ.ನವೀನ್ ಕುಮಾರ್ ಎಸ್.ಕೆ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular