HomeJobs 18-25 ವರ್ಷದ ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್: ಮೇ 5 ರಂದು ನೇರ ಸಂದರ್ಶನ

 18-25 ವರ್ಷದ ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್: ಮೇ 5 ರಂದು ನೇರ ಸಂದರ್ಶನ

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವನ್ನು ಮೇ 5 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.

‎ಈ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಧಾರವಾಡದ ಟಾಟಾ ಮೋಟಾರ್ಸ್ ಸಂಸ್ಥೆಯು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಿದ್ದಾರೆ. ‎ಐ.ಟಿ.ಐ- ಆಲ್ ಟ್ರೇಡ್ ಅಥವಾ ಎಸ್.ಎಸ್.ಎಲ್.ಸಿ, ಪಿ.ಯು.ಸಿ.,  ಡಿಪ್ಲೊಮಾ ಅಥವಾ ಇತರೆ ಪದವಿ ಅಭ್ಯರ್ಥಿಗಳು ಈ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಆಸಕ್ತ 18 ರಿಂದ 25 ವರ್ಷದೊಳಗಿನ ನಿರುದ್ಯೋಗಿ ಪುರಷರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 2 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರೆಜುಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‎ಉದ್ಯೋಗಾಕಾಂಕ್ಷಿಗಳು https://forms.gle/FfGRk1yakKtBEMaH8 ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular