ಬೆಂಗಳೂರು : ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಸಿಸಿ ಟಿವಿ, ಕ್ಯಾಮೆರಾ, ಸೆಕ್ಯೂರಿಟಿ ಅಲಾರಂ ಮತ್ತು ಸ್ಮೋಕ್ ಡಿಟೆಕ್ಟರ್ ನ ಅಳವಡಿಕೆ ಮತ್ತು ಸೇವೆ ಕುರಿತು 13 ದಿನಗಳ ಉಚಿತ ತರಬೇತಿಯನ್ನು ಜನವರಿ 28, 2026 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ನಿರುದ್ಯೋಗಿ ಯುವಕ –ಯುವತಿಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ , ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ : 9380162042, 9740982585, 9241482541 ಮತ್ತು ದೂರವಾಣಿ ಸಂಖ್ಯೆ : 080-27728166 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಶಾಖೆ, ರುಡ್ ಸೆಟ್ ಸಂಸ್ಥೆ ಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

