HomeKarnatakaನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್ : ವಿಡಿಯೋ ಗ್ರಾಫಿ ಸೇರಿ ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್ : ವಿಡಿಯೋ ಗ್ರಾಫಿ ಸೇರಿ ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕರಿಗೆ ಸಿಹಿಸುದ್ದಿ ನೀಡಿದ್ದು, ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 20ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು.

2023-24 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವ ಜನರಿಗೆ ಬೆಂಗಳೂರಿನಲ್ಲಿ ವಿವಿಧ ತರಬೇತಿಗಳನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಜಿಮ್,  ಫಿಟ್ನೆಸ್, ಬ್ಯೂಟಿಷಿಯನ್ ತರಬೇತಿ, ವಿಡಿಯೋ ಗ್ರಾಫಿ ತರಬೇತಿ ಮತ್ತು ನಿರೂಪನೆ ಹಾಗೂ ವಾರ್ತಾ ವಾಚಕರ ತರಬೆತಿ ನೀಡಲು ಅರ್ಜಿಗಳನ್ನು ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸಕ್ತರು ಜನವರಿ 20ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ 0836-2447424 ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular