HomeKarnatakaಉಪ್ಪಾರ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಉಪ್ಪಾರ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2023-24ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್ ಗಳ ಸಹಯೋಗದೊಂದಿಗೆ) ಹಾಗೂ ಸ್ವಾವಲಂಬಿ ಸಾರಥಿ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ಉಪ್ಪಾರ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರಬೇಕು. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ ಶೇ 1% ಮೀಸಲಾತಿ ಇರಿಸಿದೆ.

ಆಸಕ್ತರು ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ನವೆಂಬರ್ 03ರೊಳಗೆ ಸಲ್ಲಿಸಬಹುದು. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಉತ್ತರ ಜಿಲ್ಲೆ, ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್, ಗಂಗಾನಗರ , ಬೆಂಗಳೂರು-32 ಅಥವಾ ನಿಗಮದ ವೈಬ್ ಸೈಟ್ http://upparadevelopment.karnataka.gov.in ರಲ್ಲಿ ಅಥವಾ ನಿಗಮದ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ: 080-22252555 ಅಥವಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಉತ್ತರ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ: 080-23539600/ 23539601 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆಯ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular