
ಆಸಕ್ತರು ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಸೇವಾಸಿಂಧು ಪೆÇೀರ್ಟಲ್ನಡಿ ನ.03 ರೊಳಗಾಗಿ ಅರ್ಜಿ ಸಲ್ಲಿಸುವುದು. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ http://upparadevelopment.karnataka.gov.in ನಲ್ಲಿ ಅಥವಾ ನಿಗಮದ ಕೇಂದ್ರ ಕಚೇರಿ ದೂ.ಸಂ: 080-22252555 ನ್ನು ಹಾಗೂ ಶಿವಮೊಗ್ಗ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ/ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಭಾಗ್ಯ ನಿಲಯ, ಭಂಡಾರಿ ಏಜೆನ್ಸಿ ಹತ್ತಿರ, ಗಾಂಧಿನಗರ, ಶಿವಮೊಗ್ಗ ಇಲ್ಲಿ ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

