ವಾಲ್ಮೀಕಿ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ(2023-24) ಸಾಲಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪರಿಶಿಷ್ಟ ಪಂಗಡ ಜನರ ಆರ್ಥಿಕ ಅಭಿವೃದ್ಧಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ), ಮೈಕ್ರೋ ಕ್ರೆಡಿಟ್ ಯೋಜನೆ(ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆಯಡಿ ನಿಗಮದಿಂದ ಸಾಲ ಸೌಲಭ್ಯ ಒದಗಿಸಲು ಅರ್ಹ ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್, 29 ಕೊನೆಯ ದಿನವಾಗಿದೆ. ಯೊಜನೆಗಳ ಹೆಚ್ಚಿನ ಮಾಹಿತಿಗೆ ನಿಮಗದ ವೆಬ್ಸೈಟ್ https://kmvstdcl.karnataka.gov.in ಮೂಲಕ ಪಡೆದುಕೊಳ್ಳಬಹುದು. ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ಸೇವಾ ಸಿಂಧು/ ಗ್ರಾಮಒನ್ ತಂತ್ರಾಂಶದ ವೆಬ್ಸೈಟ್ ವಿಳಾಸ https://sevasindhuservices.karnataka.gov.in ಮೂಲಕ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ-571201 ದೂ.ಸಂ.08272-228857 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read