ವೀರಶೈವ ಲಿಂಗಾಯತ ಸಮುದಾಯಕ್ಕೆ ಸಿಹಿಸುದ್ದಿ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವೀರಶೈವ ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-3ಬಿ) ಅಭಿವೃದ್ದಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಸಾಲ ಯೋಜನೆಗಳಡಿ ಬಸವ ಬೆಳಗು ಯೋಜನೆ(ಹೊಸತು, ನವೀಕರಣ), ವಿದೇಶ ವಿದ್ಯಾ ವಿಕಾಸ ಯೋಜನೆ (ಹೊಸತು, ನವೀಕರಣ) ಮತ್ತು ಜೀವ ಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಗಳಡಿ ಸಾಲ ಸೌಲಭ್ಯ ಹಾಗೂ ಸಹಾಯಧನ ನೀಡಲಾಗುವುದು.

ಸೂಚನೆ

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು. ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು/ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಅರ್ಹ ಫಲಾಪೇಕ್ಷಿಗಳು ಗ್ರಾಮಒನ್, ಬೆಂಗಳೂರುಒನ್, ಕರ್ನಾಟಕಒನ್, ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೆÇೀರ್ಟಲ್ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ ಅಥವಾ ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನವಾಗಿರುತ್ತದೆ (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ).

ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ನಿಗಮದ ದೂ.08022865522, 9900012351 ಗೆ ಸಂಪರ್ಕಿಸಬಹುದು.ಹೆಚ್ಚಿನ ಮಾಹಿತಿಗಾಗಿ ನಗರದ ಕುಮಾರಸ್ವಾಮಿ ದೇವಸ್ಥಾನದ ಎದುರಿನ ಕ್ಲಬ್ ರಸ್ತೆಯ ವೀರನಗೌಡ ಕಾಲೋನಿಯ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ(ನಿ)ದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ಕಚೇರಿಯ ದೂ.08392-267038 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಕೆ.ಭೀಮಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read