ಬೆಳಗಾವಿ: ರೈತರ ಹಿತದೃಷ್ಟಿಯಿಂದ ಎಮ್ಮೆ ಹಾಲಿನ ದರ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಬೆಮುಲ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡಿದ್ದಾರೆ.
ಬೆಳಗಾವಿ ಗಾಂಧಿಭವನದಲ್ಲಿ ಗುರುವಾರ ನಡೆದ ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ 2024- 25 ನೇ ಸಾಲಿನ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು.
ಹಸುವಿನ ಹಾಲಿನ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬರುತ್ತಿದ್ದು, ಈ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಎಮ್ಮೆ ಹಾಲಿನ ದರ ಹೆಚ್ಚಳ ಮಾಡಲಾಗುವುದು. ಹಸುವಿನ ಹಾಲಿನ ದರವನ್ನು ಯಥಾಸ್ಥಿತಿ ಕಾಯ್ದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ
ದೀಪಾವಳಿಗೆ ಹಾಲು ಹೆಚ್ಚಾಗುತ್ತದೆ. ಎಮ್ಮೆ ಹಾಲಿಗೆ ವ್ಯಾಪಕ ಬೇಡಿಕೆ ಇದೆ. ಮುಂದಿನ ದಿನಗಳಲ್ಲಿ ಮೂರು ಲಕ್ಷ ಲೀಟರ್ ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.