HomeLatest Newsಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ 'ಬ್ಯೂಟಿ ಪಾರ್ಲರ್' ತರಬೇತಿಗೆ ಅರ್ಜಿ ಆಹ್ವಾನ

ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ ‘ಬ್ಯೂಟಿ ಪಾರ್ಲರ್’ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿಯನ್ನು ನವೆಂಬರ್ 05 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಗಳನ್ನ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 18 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular