HomeLatest Newsಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ ಟೈಲರಿಂಗ್ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ ಟೈಲರಿಂಗ್ ತರಬೇತಿ ಪಡೆಯಲು ಅರ್ಜಿ ಆಹ್ವಾನ

ರಾಯಚೂರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗಾಗಿ ಟೈಲರಿಂಗ್ ಕುರಿತು ತರಬೇತಿ ನೀಡಲು ಬಿಪಿಎಲ್ ಕಾರ್ಡ್ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 8ನೇ ತರಗತಿ ವ್ಯಾಸಂಗ ಮಾಡಿರಬೇಕು. 18ರಿಂದ 45ವರ್ಷದೊಳಗಿನ ವಯಸ್ಸು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ 31 ದಿನಗಳ ತರಬೇತಿ ನೀಡಲಾಗುವುದು.

ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ ಹಾಗೂ ಉಚಿತ ವಸತಿ ಸೌಕರ್ಯದ ವ್ಯವಸ್ಥೆ ನೀಡಲಾಗುವುದು. ಆಸಕ್ತರು ಆಧಾರ್ ಕಾರ್ಡ್, ರೇಷನ್ ಕಾರ್ಡ್, 4 ಪೋಟೋ, ಬ್ಯಾಂಕ್ ಪಾಸ್ ಪ್ರತಿಯೊಂದಿಗೆ ಜೂನ್ 10ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ(ಆರ್ಸೇಟಿ) ಆಶಾಪೂರು ರಸ್ತೆ, ರಾಯಚೂರು ಅಥವಾ ದೂರವಾಣಿ ಸಂಖ್ಯೆ: 9742470999 ಅಥವಾ 8217382735ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular