HomeLatest Newsಮಹಿಳಾ ಉದ್ದಿಮೆದಾರರಿಗೆ ಗುಡ್ ನ್ಯೂಸ್: ಗೃಹಲಕ್ಷ್ಮೀ ಡಿಜಿಟಲ್ ವೇದಿಕೆ ಸೌಲಭ್ಯ

ಮಹಿಳಾ ಉದ್ದಿಮೆದಾರರಿಗೆ ಗುಡ್ ನ್ಯೂಸ್: ಗೃಹಲಕ್ಷ್ಮೀ ಡಿಜಿಟಲ್ ವೇದಿಕೆ ಸೌಲಭ್ಯ

ಕರ್ನಾಟಕ ರಾಜ್ಯದ ಮಹಿಳೆಯರನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಅಭಿವೃದ್ದಿಗೊಳಿಸಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಮಹಿಳಾ ಉದ್ದಿಮೆದಾರರಿಗಾಗಿ ಗೃಹಲಕ್ಷ್ಮೀ ಡಿಜಿಟಲ್ ವೇದಿಕೆಯ ಸೌಲಭ್ಯ ಕಲ್ಪಿಸಲಾಗಿರುತ್ತದೆ.

ಜನವರಿ 9, 2026 ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೇಟಿಂಗ್ ಆ್ಯಪ್ ಅನ್ನು ಲಾಂಚ್ ಮಾಡಲಾಗಿರುತ್ತದೆ.

ಆ್ಯಪ್‍ನಲ್ಲಿ ಮಹಿಳಾ ಉದ್ಯಮಿಗಳ ನೋಂದಣಿ ಕಾರ್ಯಕೈಗೊಳ್ಳಲು ಮಹಿಳಾ ಉದ್ದಿಮೆದಾರರು ತಾವು ತಯಾರಿಸುವ ಉತ್ಪನ್ನಗಳ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗೆ ಸಲ್ಲಿಸಬೇಕೆಂದು ಧಾರವಾಡ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular