GOOD NEWS : ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ಸ್ತ್ರೀಶಕ್ತಿ, ಭಾಗ್ಯಲಕ್ಷ್ಮಿ ಸೇರಿ ಹಲವು ಯೋಜನೆಗಳ ಅನುಷ್ಠಾನ

ಬೆಂಗಳೂರು : ಮಹಿಳಾ ಸಬಲೀಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸ್ತ್ರೀಶಕ್ತಿ, ಭಾಗ್ಯಲಕ್ಷ್ಮಿ, ಗೃಹಲಕ್ಷ್ಮಿ, ಮಹಿಳಾ ಸಹಾಯವಾಣಿ ಸೇರಿದಂತೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ತಿಳಿಸಿದ್ದಾರೆ.

ವಿಧಾನಸಭೆಯ ಕಲಾಪದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಿವಮೊಗ್ಗ ವಿಧಾನಸಭಾ ಸದಸ್ಯ ಚನ್ನಬಸಪ್ಪ ಇವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಹಿಳೆಯರ ಸಬಲೀಕರಣಕ್ಕೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಧನಶ್ರೀ, ಮಾಜಿ ದೇವದಾಸಿ ಮಹಿಳೆ ಪುನರ್ವಸತಿ ಯೋಜನೆ, ಮಾಜಿ ದೇವದಾಸಿಯರಿಗೆ ವಸತಿ ನಿರ್ಮಾಣ ಯೋಜನೆ, ಬಡ್ಡಿ ಸಹಾಯಧನ ಯೋಜನೆ, ಮಹಿಳಾ ತರಬೇತಿ ಯೋಜನೆ, ವೃದ್ಧಿ ಯೋಜನೆ, ಕಿರುಸಾಲ ಯೋಜನೆ, ಮಹಿಳೆಯರಿಗೆ ಬಡ್ಡಿ ಸಹಾಯಧನ ಯೋಜನೆ, ಆ್ಯಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಸಾಲ ಸೌಲಭ್ಯಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಮಕ್ಕಳ ಹಕ್ಕು ರಕ್ಷಣೆ ಮಾಡುವಲ್ಲಿ ಪ್ರಸ್ತುತ ರಾಜ್ಯದಲ್ಲಿ 32 ಸರ್ಕಾರಿ ಬಾಲಕರ ಬಾಲಮಂದಿರ, 30 ಸರ್ಕಾರಿ ಬಾಲಕಿಯರ ಬಾಲಮಂದಿರ, 0-6 ವರ್ಷದೊಳಗಿನ ಮಕ್ಕಳಿಗೆ 1 ಶಿಶುಮಂದಿರ, 04 ಬುದ್ದಿಮಾಂದ್ಯ ಮಕ್ಕಳ ಬಾಲ ಮಂದಿರ ಹಾಗೂ ಬಾಲಕರಿಗಾಗಿ 16 ವೀಕ್ಷಣಾಲಯ ಮತ್ತು ಬಾಲಕಿಯರಿಗಾಗಿ 01 ವೀಕ್ಷಣಾಲಯ, 21 ಸರ್ಕಾರಿ ವಿಶೇಷ ದತ್ತು ಸಂಸ್ಥೆಗಳು, 23 ಸರ್ಕಾರೇತರ ವಿಶೇಷ ದತ್ತು ಸಂಸ್ಥೆಗಳು, 29 ತೆರೆದ ತಂಗುದಾಣಗಳು, 32 ನಿರ್ಗತಿಕ ಮಕ್ಕಳ ಕುಟೀರ, 05 ಅರ್ಹ ಸಂಸ್ಥೆ ಮತ್ತು 07 ಅನುಪಾಲನಾ ಗೃಹಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಪರವಾಗಿ ಉತ್ತರಿಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read