HomeKarnatakaರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : `ಆಧಾರ್ ಕಾರ್ಡ್ ಝೆರಾಕ್ಸ್' ತೋರಿಸಿದ್ರೂ ಉಚಿತ ಪ್ರಯಾಣಕ್ಕೆ...

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : `ಆಧಾರ್ ಕಾರ್ಡ್ ಝೆರಾಕ್ಸ್’ ತೋರಿಸಿದ್ರೂ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು : ರಾಜ್ಯದ ಮಹಿಳೆಯರಿಗೆ ಸಾರಿಗೆ ಇಲಾಖೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶಕ್ತಿ ಯೋಜನೆಯಡಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಈಗ ನಿಗದಿತ ಗುರುತಿನ ಚೀಟಿಗಳ ಝರಾಕ್ಸ್ ಪ್ರತಿಗಳನ್ನು ಮಾನ್ಯ ಮಾಡಲು ರಾಜ್ಯ ಸಾರಿಗೆ ಸಂಸ್ಥೆ ನಿರ್ಧರಿಸಿದೆ.  

ಮೊಬೈಲ್ ನಲ್ಲಿರುವ ಆಧಾರ್ ಕಾರ್ಡ್ ಸಾಫ್ಟ್ ಕಾಪಿ ತೋರಿಸಿಯೂ ಪ್ರಯಾಣಿಸಬಹುದು. ಹೀಗಾಗಿ ಉಚಿತ ಬಸ್ ಪ್ರಯಾಣಕ್ಕೆ ಐಡಿ ಕಾರ್ಡ್ ಒರಿಜನಲ್ ಕಡ್ಡಾಯ ಎಂಬ ಹಿಂದಿನ ಆದೇಶದಿಂದ ನಿರಾಳರಾಗಿದ್ದಾರೆ. ಸರ್ಕಾರದ ಸೂಚನೆಗಳನ್ನು ಪಾಲಿಸಲು ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಾಯಾಣಿಸಲು ಅವಕಾಶ ನೀಡಲಾಗಿದೆ. ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸುವಾಗ ಆಧಾರ್ ಕಾರ್ಡ್ ಮೂಲ, ನಕಲು, ಡಿಜಿಲಾಕರ್ ನಲ್ಲಿ ಹಾರ್ಡ್ ಮತ್ತು ಸಾಫ್ಟ್ ಕಾಪಿ ಮಾದರಿಯಲ್ಲಿ ತೋರಿಸಿದಲ್ಲಿ, ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ

For Latest News Updates, Join Our Whatsapp Community🚩
RELATED ARTICLES

Most Popular