HomeLatest Newsರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ಆರ್ಥಿಕ ಸ್ಥಿತಿ ಸುಧಾರಣೆಗೆ 'ಗೃಹಲಕ್ಷ್ಮಿ' ಡಿಜಿಟಲ್‌ ಮಾರ್ಕೆಟಿಂಗ್‌ ಆ್ಯಪ್

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ಆರ್ಥಿಕ ಸ್ಥಿತಿ ಸುಧಾರಣೆಗೆ ‘ಗೃಹಲಕ್ಷ್ಮಿ’ ಡಿಜಿಟಲ್‌ ಮಾರ್ಕೆಟಿಂಗ್‌ ಆ್ಯಪ್

ಮಹಿಳೆಯರ ಆರ್ಥಿಕ ಸುಧಾರಣೆಗೆ ಗೃಹಲಕ್ಷ್ಮಿ ಡಿಜಿಟಲ್‌ ಮಾರ್ಕೆಟಿಂಗ್‌ ಅನುಕೂಲ ಆಗಲಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಆ್ಯಪ್ ಬಗ್ಗೆ ತಿಳಿಸಲು ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ತಿಳಿಸಿದ್ದಾರೆ.

ಮಹಿಳಾ ಅಭಿವೃದ್ಧಿ ನಿಗಮದಿಂದ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಗೆ ಚಾಲನೆ ನೀಡಲಾಗಿದೆ. ಮಹಿಳಾ ಸಬಲೀಕರಣಕ್ಕಾಗಿ ಕರ್ಮಣಿ ಉತ್ಸವ, ಗೃಹಲಕ್ಷ್ಮಿ ಡಿಜಿಟಲ್ ಅನಾವರಣ ಮಾಡಲಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ನಮ್ಮ ಸರ್ಕಾರ ಎಲ್ಲಾ ರೀತಿಯ ನೆರವು ನೀಡುತ್ತಿದೆ. ಮಹಿಳೆಯರ ಆರ್ಥಿಕ ಸುಧಾರಣೆಗೆ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಅನುಕೂಲವಾಗಲಿದ್ದು, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular