HomeKarnatakaಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಗುಡ್ ನ್ಯೂಸ್ : ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಗುಡ್ ನ್ಯೂಸ್ : ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ  :ಶಿಶು ಅಭಿವೃದ್ಧಿ ಯೋಜನೆಯ ಹುಬ್ಬಳ್ಳಿ-ಧಾರವಾಡ (ಶಹರ)   ವ್ಯಾಪ್ತಿಯಲ್ಲಿ ಖಾಲಿ ಇರುವ 113 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಗೌರವಸೇವೆಗಾಗಿ    ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದನ್ನು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿಗಳ ಆದೇಶದಂತೆ, ಆಫ್‍ಲೈನ್ ಮೂಲಕ ಆಹ್ವಾನಿಸಿರುವ ಅರ್ಜಿ ಪ್ರಕ್ರಿಯೆಯನ್ನು ರದ್ದುಪಡಿಸಲಾಗಿದೆ. ಮತ್ತು ಅವರ ನಿರ್ದೇಶನದಂತೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುವುದು.   

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆಯ್ಕೆ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಆಫ್‍ಲೈನ್ ಮೂಲಕ ಕರೆದಿರುವ ಹಿಂದಿನ ಪ್ರಕಟಣೆಯನ್ನು ರದ್ದುಪಡಿಸಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅತೀ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಶಹರ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular