ಬೆಂಗಳೂರು: ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆ ತೆರೆಯಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಪ್ರತಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಸದಸ್ಯರಾದ ಡಿ.ಎಸ್. ಅರುಣ್, ಕೆ.ಎಸ್. ನವೀನ್ ಅವರು, ಕಟ್ಟಡ ಕಾರ್ಮಿಕರ ಮಕ್ಕಳಿಗೆ 750 ಕೋಟಿ ರೂ. ವೆಚ್ಚದಲ್ಲಿ ಪ್ರತ್ಯೇಕ ವಸತಿ ಶಾಲೆ ನಿರ್ಮಾಣ ಅಗತ್ಯವಿಲ್ಲ. ಈಗಾಗಲೇ ಇರುವ ಸರ್ಕಾರಿ ಶಾಲಾ, ಕಾಲೇಜು, ವಸತಿ ಶಾಲೆಗಳಿಗೆ ವರ್ಗಾವಣೆ ಮಾಡಿ ಕಾರ್ಮಿಕರ ಮಕ್ಕಳಿಗೆ ವಿಶೇಷ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿದ್ದಾರೆ.
ಇದಕ್ಕೆ ಉತ್ತರಿಸಿದ ಸಚಿವ ಸಂತೋಷ್ ಲಾಡ್, ಕಟ್ಟಡ ಕಾರ್ಮಿಕರಿಂದ ಸಂಗ್ರಹಿಸುವ ಸೆಸ್ ಅನ್ನು ಅವರ ಕ್ಷೇಮಾಭಿವೃದ್ಧಿಗೆ ಬಳಸಬೇಕೆಂದು ಕೇಂದ್ರದ ಕಾಯ್ದೆಯಲ್ಲಿ ಷರತ್ತು ಇದೆ. ಹಾಗಾಗಿ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆ ಸ್ಥಾಪಿಸಲು 750 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. 6ನೇ ತರಗತಿಯಿಂದ 12ನೇ ತರಗತಿಯವರೆಗೆ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಲಾಗುವುದು. ಇದಕ್ಕಾಗಿ ಮೀಸಲಿಟ್ಟ ಹಣವನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಕಾರ್ಮಿಕ ವಸತಿ ಶಾಲೆಗಳ ಸ್ಥಾಪನೆಗೆ ಕ್ರಮ
— DIPR Karnataka (@KarnatakaVarthe) August 13, 2025
– @SantoshSLadINC , ಕಾರ್ಮಿಕ ಸಚಿವರು pic.twitter.com/1qma34mjz7