GOOD NEWS : ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಗುಡ್ ನ್ಯೂಸ್ : ‘ಕಿಟ್ ವಿತರಣೆ’ ನಿಯಮಕ್ಕೆ ಮಾರ್ಪಾಡು ತರಲು ಚಿಂತನೆ

ಬೆಳಗಾವಿ :   ಕಾರ್ಮಿಕ ಇಲಾಖೆ ವತಿಯಿಂದ ವಿವಿಧ ವೃತ್ತಿ ಮಾಡುತ್ತಿರುವ ರಾಜ್ಯದ ಕಾರ್ಮಿಕರಿಗೆ 7 ಲಕ್ಷ ಟೂಲ್ ಕಿಟ್ ವಿತರಿಸಲಾಗಿದೆ. ಒಮ್ಮೆ ಕಾರ್ಮಿಕ ಕಿಟ್ ಪಡೆದರೆ ಮತ್ತ್ತೊಮ್ಮೆ ಅದೇ ಕಾರ್ಮಿಕರಿಗೆ ಕಿಟ್ ನೀಡಲು ಸದ್ಯ ಇರುವ ನಿಯಮಗಳಲ್ಲಿ ಅವಕಾಶವಿಲ್ಲ. ಈ ನಿಯಮಕ್ಕೆ ಮಾರ್ಪಾಡು ತಂದು 5 ವರ್ಷಗಳ ಕಾಲಮಿತಿಯನ್ನು ನಿಗದಿಪಡಿಸಲು ಚಿಂತನೆ ನಡೆಸಲಾಗುತ್ತಿದೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹರೀಶ್‌ ಪೂಂಜಾ ಅವರ ಪ್ರಶ್ನೆಗೆ ಕಾರ್ಮಿಕ ಸಚಿವರಾದ ಸಂತೋಷ್‌ ಲಾಡ್‌ ಅವರು ಉತ್ತರ ನೀಡಿದರು.

ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ಟೂಲ್ ಕಿಟ್ ಪಡೆಯುವ ಫಲಾನುಭವಿಗಳಿಗೆ ಕಾಲಮಿತಿ ನಿಗದಿ ಮಾಡಲಾಗುವುದು. ಶೇ.13ರಷ್ಟು ಕಾರ್ಮಿಕ ಮಹಿಳೆಯರು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ ಎಂದು ವರದಿ ಬಂದಿದೆ. ಆದ್ದರಿಂದ ಸರ್ಕಾರ ಪೌಷ್ಠಿಕ ಆಹಾರದ ಕಿಟ್‍ಗಳನ್ನು ನೀಡಲು ಸಿದ್ದತೆ ನಡೆಸಿದೆ. ವ್ಯಾಸಂಗ ಮಾಡುತ್ತಿರುವ ಕಾರ್ಮಿಕರ ಮಕ್ಕಳಿಗೆ ಈ ಹಿಂದೆ ಶಾಲಾ ಕಿಟ್ ನೀಡಲಾಗುತ್ತಿತ್ತು. ಇದರ ಬದಲಾಗಿ ವಿದ್ಯಾರ್ಥಿವೇತನ ನೀಡಲಾಗುತ್ತಿದೆ ಎಂದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read