HomeKarnatakaಕಾರ್ಮಿಕರಿಗೆ ಗುಡ್ ನ್ಯೂಸ್ : ಮಾಸಿಕ ಪ್ರೋತ್ಸಾಹಧನ 2,000 ರೂ.ಗೆ ಹೆಚ್ಚಳ

ಕಾರ್ಮಿಕರಿಗೆ ಗುಡ್ ನ್ಯೂಸ್ : ಮಾಸಿಕ ಪ್ರೋತ್ಸಾಹಧನ 2,000 ರೂ.ಗೆ ಹೆಚ್ಚಳ

ಬೆಂಗಳೂರು :ರಾಜ್ಯ ಸರ್ಕಾರವು ಜೀತ ಕಾರ್ಮಿಕ ಪದ್ಧತಿಯಿಂದ ಬಿಡುಗಡೆಗೊಂಡ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು,  ಪುನರ್ವಸತಿಗಾಗಿ ನೀಡುವ ಮಾಸಿಕ ಪ್ರೋತ್ಸಾಹಧನ 2,000 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಬಜೆಟ್‌ ನಲ್ಲಿ ಘೋಷಣೆ ಮಾಡಿದ್ದು, ಅರಿವು ಕೇಂದ್ರಗಳ ಬಲವರ್ಧನೆಗೆ ರೂ.132 ಕೋಟಿ ಅನುದಾನ ನೀಡಲಾಗುವುದು,  ಜೊತೆಗೆ ಜೀತ ಕಾರ್ಮಿಕ ಪದ್ಧತಿಯಿಂದ ಬಿಡುಗಡೆಗೊಂಡ ಕಾರ್ಮಿಕರ ಪುನರ್ವಸತಿಗಾಗಿ ನೀಡುವ ಮಾಸಿಕ ಪ್ರೋತ್ಸಾಹಧನ 2,000 ರೂ.ಗಳಿಗೆ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಗತಿ ಪಥ ಯೋಜನೆಯಡಿ ರೂ.5,200 ಕೋಟಿ ವೆಚ್ಚದಲ್ಲಿ 189 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟಾರೆ 9,450 ಕಿ.ಮೀ. ಉದ್ದದ ರಸ್ತೆ ಸಂಪರ್ಕ ಜಾಲದ ಅಭಿವೃದ್ಧಿ, ಕಲ್ಯಾಣ ಪಥ ಯೋಜನೆಯಡಿ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ ರೂ.1,000 ಕೋಟಿ ವೆಚ್ಚದಲ್ಲಿ ಒಟ್ಟು 1,150 ಕಿ.ಮೀ. ರಸ್ತೆ ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular