ರಾಜ್ಯದ ಕಾರ್ಮಿಕ ಮಹಿಳೆಯರಿಗೆ ಸಿಹಿಸುದ್ದಿ : ವೇತನ ಸಹಿತ `ಮುಟ್ಟಿನ ರಜೆ’!

ದಾವಣಗೆರೆ :ರಾಜ್ಯದ ಕಾರ್ಮಿಕರ ಮಹಿಳೆಯರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಿಹಿಸುದ್ದಿ ನೀಡಿದ್ದು,  ಕಾರ್ಮಿಕ ಮಹಿಳೆಯರಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪಾಲಿಕೆಯ ಸಭಾಂಗಣದಲ್ಲಿ ಸಂಘಟಿತ, ಅಸಂಘಟಿತ ಮತ್ತು ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಂದ ಅಹವಾಲು ಆಲಿಸಿ ಸರ್ಕಾರದಿಂದ ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ಮಾತನಾಡಿದರು.  ಕಾರ್ಮಿಕ ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಅವರಿಗೆ ವೇತನ ಸಹಿತ ಮುಟ್ಟಿನ ರಜೆಯನ್ನು ನೀಡಬೇಕೆಂದು ಸಾಕಷ್ಟು ಕಾರ್ಮಿಕ ಸಂಘಟನೆಗಳ ಒತ್ತಾಯವಾಗಿದ್ದು ಪ್ರತಿ ತಿಂಗಳು ವೇತನ ಸಹಿತ ಒಂದು ದಿನ ಮುಟ್ಟಿನ ರಜೆಯನ್ನು ನೀಡುವ ಬಗ್ಗೆ ಪ್ರಸ್ತಾವನೆ ಇದೆ ತಿಳಿಸಿದರು.

ಎಪಿಎಂಸಿಗಳಲ್ಲಿ ಕೆಲಸ ಮಾಡುವ ಹಮಾಲರಿಗೆ 60 ವರ್ಷದ ನಂತರ ಅವರ ಪರವಾನಗಿಯನ್ನು ನವೀಕರಣ ಮಾಡಲಾಗುತ್ತಿಲ್ಲ, ಇದರಿಂದ ನಮಗೆ ಯಾವುದೇ ಜೀವನ ನಿರ್ವಹಣಾ ದುಡಿಮೆ ಇಲ್ಲದಿರುವುದರಿಂದ ವಯೋಮಿತಿ ಹೆಚ್ಚಿಸಬೇಕೆಂದಾಗ ಈ ವಯಸ್ಸನ್ನು 65 ವರ್ಷಗಳಿಗೆ ಏರಿಕೆ ಮಾಡಲು ಪರಿಶೀಲನೆ ನಡೆಸಲಾಗುತ್ತದೆ ಎಂದು ತಿಳಿಸಿ ಶ್ರಮಿಕ ಭವನಕ್ಕೆ ಮೂಲಭೂತ ಸೌಕರ್ಯಗಳಿಲ್ಲ ಎಂದು ತಿಳಿಸಿದ್ದು ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read