HomeKarnatakaಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ವಾರದೊಳಗೆ ʻಚಿಕಿತ್ಸೆ ಬಿಲ್ʼ ಪಾವತಿ ವ್ಯವಸ್ಥೆ

ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ವಾರದೊಳಗೆ ʻಚಿಕಿತ್ಸೆ ಬಿಲ್ʼ ಪಾವತಿ ವ್ಯವಸ್ಥೆ

ಬೆಂಗಳೂರು : ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಯಶಸ್ವಿನಿ ಯೋಜನೆಯಡಿ 1 ವಾರದೊಳಗೆ ಚಿಕಿತ್ಸೆ ಬಿಲ್‌ ಪಾವತಿ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಸಹಕಾರಿ ಸಚಿವ ಕೆ.ಎನ್.‌ ರಾಜಣ್ಣ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ಯಶಸ್ವಿನಿ ಯೋಜನೆಯಡಿ ಚಿಕಿತ್ಸಾ ದರವನ್ನು ಕೇಂದ್ರದ ‘ಆಯುಷ್ಮಾನ್‌ ಭಾರತ್‌ – ಆರೋಗ್ಯ ಕರ್ನಾಟಕ’ ಯೋಜನೆಯ ದರಕ್ಕೆ ಸಮಾನವಾಗಿ ಪರಿಷ್ಕರಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಖಾಸಗಿ ಆಸ್ಪತ್ರೆಗಳು ಸಮ್ಮತಿಸಿವೆ ಎಂದು ತಿಳಿಸಿದ್ದಾರೆ.

ಯಶಸ್ವಿನಿ ಯೋಜನೆಯಡಿ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಿದ ಒಂದು ವಾರದೊಳಗೆ ಬಿಲ್ ಪಾವತಿ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಹಾಗೆಯೇ ಯೋಜನೆಯಡಿ ಚಿಕಿತ್ಸಾ ದರವನ್ನು ಕೇಂದ್ರ ಸರ್ಕಾರದ ‘ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ’ ಯೋಜನೆಯ ಚಿಕಿತ್ಸಾ ದರಕ್ಕೆ ಸಮಾನವಾಗಿ ಪರಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular