ಅಲ್ಪಸಂಖ್ಯಾತ ಸಮುದಾಯದ ಯುವಕ, ಯುವತಿಯರಿಗೆ ಗುಡ್ ನ್ಯೂಸ್ : ನವೋದ್ಯಮಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೊಡಗು ಇವರ ವತಿಯಿಂದ 2025-26ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದ ಯುವಕ, ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನಿಡುವ ಯೋಜನೆಗಳನ್ನು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಹಯೋಗದೊಂದಿಗೆ ಎಲಿವೇಟ್(ಇಎಲ್ಇವಿಎಟಿಇ)(ಮೈನಾರಿಟೀಸ್)-2025 ರಲ್ಲಿನ ಮಾರ್ಗಸೂಚಿಗಳೊಂದಿಗೆ ಜಾರಿಗೊಳಿಸಲಾಗಿದೆ.

ಈ ಯೋಜನೆಗೆ https://eitbt.karnataka.gov.in/en ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.080-2223100 ಅಥವಾ ಇ-ಮೇಲ್ elevate.ktech@ka.gov.in ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read