HomeLatest Newsಅಲ್ಪಸಂಖ್ಯಾತ ಸಮುದಾಯದ ಯುವಕ, ಯುವತಿಯರಿಗೆ ಗುಡ್ ನ್ಯೂಸ್ : ನವೋದ್ಯಮಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ಸಮುದಾಯದ ಯುವಕ, ಯುವತಿಯರಿಗೆ ಗುಡ್ ನ್ಯೂಸ್ : ನವೋದ್ಯಮಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೊಡಗು ಇವರ ವತಿಯಿಂದ 2025-26ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದ ಯುವಕ, ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನಿಡುವ ಯೋಜನೆಗಳನ್ನು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಹಯೋಗದೊಂದಿಗೆ ಎಲಿವೇಟ್(ಇಎಲ್ಇವಿಎಟಿಇ)(ಮೈನಾರಿಟೀಸ್)-2025 ರಲ್ಲಿನ ಮಾರ್ಗಸೂಚಿಗಳೊಂದಿಗೆ ಜಾರಿಗೊಳಿಸಲಾಗಿದೆ.

ಈ ಯೋಜನೆಗೆ https://eitbt.karnataka.gov.in/en ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.080-2223100 ಅಥವಾ ಇ-ಮೇಲ್ [email protected] ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular