HomeLatest Newsಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಉಚಿತ ಕೌಶಲ್ಯ ತರಬೇತಿ

ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಉಚಿತ ಕೌಶಲ್ಯ ತರಬೇತಿ

ಯುವನಿಧಿ ಫಲಾನುಭವಿಗಳು ಉಚಿತ ಕೌಶಲ್ಯ ತರಬೇತಿಗಾಗಿ ತಮ್ಮ ತಾಲ್ಲೂಕಿನ ಸಮೀಪದ ಐಟಿಐ, ಜಿಟಿಟಿಸಿ, ಸಿಡಾಕ್ ತರಬೇತಿ ಸಂಸ್ಥೆಗಳನ್ನು ನೇರವಾಗಿ ಸಂಪರ್ಕಿಸಿ ವಿವಿಧ ಕೌಶಲ್ಯ ತರಬೇತಿ ಪಡೆಯುವಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಜಿಲ್ಲೆಯ ಎಲ್ಲಾ ಯುವನಿಧಿ ಫಲಾನುಭವಿಗಳು ಯುವನಿಧಿ ಪ್ಲಸ್ ಯೋಜನೆಯಡಿ ಕೌಶಲ್ಯ ತರಬೇತಿ ಪಡೆಯಲು ತಮ್ಮ ತಾಲ್ಲೂಕಿನ ಸಮೀಪದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು(ಐಟಿಐ), ಸಿಡಾಕ್ ತರಬೇತಿ ಸಂಸ್ಥೆ, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ಗಳ ತರಬೇತಿ ಸಂಸ್ಥೆಗಳನ್ನು ಇದೇ ನ.24ರೊಳಗೆ ನೇರವಾಗಿ ಸಂಪರ್ಕಿಸಿ ಸ್ವ ವಿವರಗಳೊಂದಿಗೆ ನೋಂದಾಯಿಸುವ ಮೂಲಕ ಉಚಿತವಾಗಿ ವಿವಿಧ ಕೌಶಲ್ಯ ತರಬೇತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಟೇಶ್ ಕೋರಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular