ಬೆಂಗಳೂರು : ಯುವನಿಧಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ರಾಜ್ಯ ಸರ್ಕಾರವು ಈಗಾಗಲೇ ಯುವನಿಧಿ ಯೋಜನೆಯಡಿ ಪದವಿ ಪಡೆದು ಆರು ತಿಂಗಳಾದರೂ ನಿರುದ್ಯೋಗಿಗಳಾಗಿರುವ ಪದವೀಧರ ಯುವಕರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡುತ್ತಿದೆ. ನಿರುದ್ಯೋಗಿ ಯುವಜನರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
ಈಗಾಗಲೇ ಯುವನಿಧಿ ಯೋಜನೆಗೆ ನೋಂದಾಯಿಸಿಕೊಂಡಿರುವ ಒ೦ದು ಲಕ್ಷಕ್ಕೂ ಹೆಚ್ಚು ಯುವಜನರಿಗೆ ಈ ಯೋಜನೆಯಡಿ ಡಿಬಿಟಿ ಮೂಲಕ ಆರ್ಥಿಕ ನೆರವು