ಬೆಂಗಳೂರು : ಆಸ್ತಿ ತೆರಿಗೆ ಪಾವತಿದಾರರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಶೇ 5.ರಷ್ಟು ರಿಯಾಯಿತಿ ಜುಲೈ ವರೆಗೆ ವಿಸ್ತರಣೆ ಮಾಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರ್ಥಿಕ ಹಿತದೃಷ್ಟಿಯಿಂದ 2024-25ನೇ ಸಾಲಿನಲ್ಲಿ ಆಸ್ತಿ ತೆರಿಗೆಯನ್ನು ಸಂಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಶೇ 5 ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ದಿನಾಂಕ: 01-05-2024 ರಿಂದ 31-07-2024 ರವರೆಗೆ ವಿಸ್ತರಿಸಿ ಆದೇಶಿಸಿದೆ.