HomeLatest NewsNHM ಸಿಬ್ಬಂದಿಗೆ ಆರೋಗ್ಯ ಸಚಿವರಿಂದ ಗುಡ್ ನ್ಯೂಸ್: ಇನ್ಮುಂದೆ ಸಮಯಕ್ಕೆ ಸರಿಯಾಗಿ ವೇತನ ಪಾವತಿ

NHM ಸಿಬ್ಬಂದಿಗೆ ಆರೋಗ್ಯ ಸಚಿವರಿಂದ ಗುಡ್ ನ್ಯೂಸ್: ಇನ್ಮುಂದೆ ಸಮಯಕ್ಕೆ ಸರಿಯಾಗಿ ವೇತನ ಪಾವತಿ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ(ಎನ್.ಎಚ್.ಎಂ.) ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಪಾವತಿ ವಿಳಂಬವಾಗಿರುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

ಕೇಂದ್ರ ಸರ್ಕಾರವು 2025–26ರ ಹಣಕಾಸು ವರ್ಷದ ಮಧ್ಯದಲ್ಲಿ SNA-SPARSH ಪಾವತಿ ವ್ಯವಸ್ಥೆಯನ್ನು ನವೀಕರಿಸುವ ನೀತಿಯನ್ನು ಜಾರಿಗೆ ತಂದಿತ್ತು. ಈ ನವೀಕರಣದ ಪರಿಣಾಮ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎರಡೂ ಕಡೆ ಪಾವತಿ ಪ್ರಕ್ರಿಯೆ ಹಾಗೂ ತಾಂತ್ರಿಕ ವ್ಯವಸ್ಥೆಗಳಲ್ಲಿ ಬದಲಾವಣೆ ಮತ್ತು ಮರುಹೊಂದಾಣಿಕೆ  ನಡೆಯಬೇಕಾಗಿತ್ತು. ಈ ಹೊಸ ವ್ಯವಸ್ಥೆಗೆ ಹೊಂದಿಕೊಳ್ಳುವ ಪರಿಸ್ಥಿತಿಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಸಿಬ್ಬಂದಿಗೆ ಎರಡು ತಿಂಗಳುಗಳ ಕಾಲ ನಿರಂತರವಾಗಿ ವೇತನ ಪಾವತಿ ವಿಳಂಬವಾಗಿತ್ತು ಎಂದು ತಿಳಿಸಿದ್ದಾರೆ.

ಈ ವ್ಯವಸ್ಥೆಯಡಿಯಲ್ಲಿ ಕೇಂದ್ರ ಸರ್ಕಾರದ ಪಾಲು ಬಂದ ನಂತರವಷ್ಟೇ ರಾಜ್ಯ ಸರ್ಕಾರದಿಂದ ಪಾವತಿಗಳನ್ನು ಪ್ರಕ್ರಿಯೆಗೊಳಿಸಲು ಸಾಧ್ಯವಾಗುತ್ತಿತ್ತು. ಆದ್ದರಿಂದ ಕೇಂದ್ರದಿಂದ ಅನುದಾನ ನೀಡಿಕೆಯಲ್ಲಿ ಉಂಟಾದ ವಿಳಂಬ ಮತ್ತು ಹೊಸ ವ್ಯವಸ್ಥೆಯ ಕಾರಣದಿಂದ NHM ಸಿಬ್ಬಂದಿಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿಸುವುದಕ್ಕೆ ಅಡ್ಡಿಯಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೇತನ ಪಾವತಿಗಾಗಿ 8ನೇ ಜನವರಿ 2026ರಂದು ಕೇಂದ್ರ ಸರ್ಕಾರವು ₹175.75 ಕೋಟಿ ಬಿಡುಗಡೆ ಮಾಡಿತು. ಈ ಮೊತ್ತವನ್ನು ಈಗ ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ನಾನು ಈ ಮೂಲಕ ನಮ್ಮೆಲ್ಲ ಆರೋಗ್ಯ ಸಿಬ್ಬಂದಿಗೆ ಭರವಸೆ ನೀಡುತ್ತಿದ್ದೇನೆ. ಇನ್ನು ಮುಂದೆ ಕೇಂದ್ರ ಸರ್ಕಾರದಿಂದ ಅನುದಾನ ಯಾವಾಗ ಬರುತ್ತದೆ ಎಂಬುದನ್ನು ಲೆಕ್ಕಿಸದೆ, ನಮ್ಮ ಸರ್ಕಾರ‌ ಆರೋಗ್ಯ ಸಿಬ್ಬಂದಿಯ ವೇತನವನ್ನು ಸಮಯಕ್ಕೆ ಸರಿಯಾಗಿ ಪಾವತಿಸುವುದಕ್ಕೆ ಮೊದಲ ಆದ್ಯತೆ ನೀಡಲಿದೆ. ಜೊತೆಗೆ ವೇತನ ಪಾವತಿ ಸುಗಮವಾಗುವಂತೆ ಮಾಡಲು ಹಾಗೂ ಇಂತಹ ವಿಳಂಬಗಳು ಮರುಕಳಿಸದಂತೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿ, ಪಾವತಿ ವ್ಯವಸ್ಥೆಯನ್ನು ಸರಳ ಮತ್ತು ಪರಿಣಾಮಕಾರಿಯಾಗಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular