GOOD NEWS: ಇನ್ಮುಂದೆ ಭಕ್ತರ ಮನೆ ಬಾಗಿಲಿಗೆ ರಾಜ್ಯದ ಪ್ರಮುಖ ದೇವಾಲಯಗಳ ಪ್ರಸಾದಗಳು, ಜಸ್ಟ್ ಹೀಗೆ ಪಡೆಯಿರಿ

ಬೆಂಗಳೂರು : ಇನ್ನು ಮುಂದೆ ರಾಜ್ಯದ ಪ್ರಮುಖ ದೇವಾಲಯಗಳ ಪ್ರಸಾದಗಳು ಭಕ್ತರ ಮನೆ ಬಾಗಿಲಿಗೆ ಬರಲಿದೆ. ಧಾರ್ಮಿಕ ದತ್ತಿ ಇಲಾಖೆಯಡಿ 35 ಸಾವಿರಕ್ಕೂ ಹೆಚ್ಚು ದೇವಾಲಯಗಳಿವೆ. ಅವುಗಳಲ್ಲಿ ʼಎʼ ಮತ್ತು ʼಬಿʼ ದರ್ಜೆಯ 390 ದೇವಾಲಯಗಳಿವೆ. ಭಕ್ತಾದಿಗಳು ʼಇ-ಪ್ರಸಾದʼ ವೆಬ್ಸೈಟ್ ಮೂಲಕ ಮೊದಲ ಹಂತದಲ್ಲಿ 14 ಪ್ರಮುಖ ದೇವಾಲಯಗಳಿಂದ ಪ್ರಸಾದವನ್ನು ಆನ್ಲೈನ್ ಮೂಲಕ ಆರ್ಡರ್ ಮಾಡಿ ಪಡೆಯಲು ಅನುಕೂಲ ಕಲ್ಪಿಸಲಾಗಿದೆ.

“ನಾನಾ ಕಾರಣಗಳಿಂದಾಗಿ ಎಲ್ಲರಿಗೂ ದೇವಸ್ಥಾನಗಳಿಗೆ ಹೋಗಲು ಸಾಧ್ಯವಾಗುವುದಿಲ್ಲ. ವಯಸ್ಸಾದವರು, ವಿಶೇಷ ಚೇತನರು, ಒಬ್ಬಂಟಿಗರು ಒಳಗೊಂಡಂತೆ ಗ್ರಾಮೀಣ, ನಗರ ಹಾಗೂ ಹೊರ ರಾಜ್ಯದ ಭಕ್ತಾದಿಗಳ ಅನುಕೂಲಕ್ಕಾಗಿ ʼಇ-ಪ್ರಸಾದʼ ಸೇವೆ ಆರಂಭಿಸಲಾಗಿದೆ. ರಾಜ್ಯದ ಯಾವುದೇ ಭಾಗದ ಭಕ್ತಾದಿಗಳು ಪ್ರಸಾದಕ್ಕೆ ಆರ್ಡರ್ ಮಾಡಿದರೆ ಸಿಎಸ್ಸಿ ಇ ಗವರ್ನೆನ್ಸ್ ಸಂಸ್ಥೆಯು ಮನೆ ಬಾಗಿಲಿಗೆ ತಲುಪಿಸಲಿದೆ” ಎಂದು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read