HomeLatest Newsಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಹೊಸ ಪಿಂಚಣಿ ರದ್ದುಗೊಳಿಸಿ ಹಳೆಪಿಂಚಣಿ ವ್ಯವಸ್ಥೆ ಜಾರಿಗೆ ಸರ್ಕಾರ ಕ್ರಮ ಕೈಗೊಂಡಿದೆ.

ನೌಕರರ ವಲಯದಿಂದ ತೀವ್ರ ಒತ್ತಡ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಳೆಪಿಂಚಣಿ ವ್ಯವಸ್ಥೆ ಜಾರಿಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಒಪಿಎಸ್ ಗೆ ಒಳಪಡುವ ಸರ್ಕಾರಿ ನೌಕರರ ಪ್ರಸ್ತಾವನೆಗಳನ್ನು ಪರಿಶೀಲಿಸಿ ಶೀಘ್ರವಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ಮೂವರು ಅಧಿಕಾರಿಗಳ ತಂಡ ರಚಿಸಿ ಕಾರ್ಯ ಹಂಚಿಕೆ ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.

ಹಳೆ ಪಿಂಚಣಿಗೆ ಒಳಪಡುವ ಸರ್ಕಾರಿ ನೌಕರರ ಪ್ರಸ್ತಾವನೆಗಳನ್ನು ಪರಿಶೀಲಿಸಿ ಶೀಘ್ರವಾಗಿ ಇತ್ಯರ್ಥಪಡಿಸುವುದು ಈ ತಂಡಗಳ ಜವಾಬ್ದಾರಿಯಾಗಿದೆ. ನೌಕರರ ವಲಯದಿಂದ ಎನ್.ಪಿ.ಎಸ್. ರದ್ದು ಮಾಡಿ ಒಪಿಎಸ್ ಜಾರಿಗೊಳಿಸಬೇಕೆಂಬ ಬೇಡಿಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೌಕರರನ್ನು ಸಮಾಧಾನಪಡಿಸುವ ಉದ್ದೇಶದಿಂದ ಸರ್ಕಾರ ಮೂರು ತಂಡಗಳನ್ನು ರಚನೆ ಮಾಡಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular