ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಎ ಖಾತಾ ರೀತಿ ಬಿ ಖಾತಾಗೂ ಅಧಿಕೃತ ಮಾನ್ಯತೆ ನೀಡಲು ಸಂಪುಟ ನಿರ್ಧಾರ

ಬೆಂಗಳೂರು: ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಬಿ ಖಾತಾ ಆಸ್ತಿಗಳಿಗೆ ಎ ಖಾತಾ ರೀತಿಯಲ್ಲಿ ಅಧಿಕೃತ ಮಾನ್ಯತೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಎ ಖಾತಾ ಬಿ ಖಾತಾ ಕುರಿತಾದ ಗೊಂದಲಕ್ಕೆ ತೆರೆ ಎಳೆಯಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಎ ಖಾತಾ ರೀತಿಯಲ್ಲಿ ಬಿ ಖಾತಾ ಆಸ್ತಿಗಳಿಗೂ ಅಧಿಕೃತ ಮಾನ್ಯತೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು.

2020ರ ಮೇ 22 ರಿಂದ ಅನ್ವಯವಾಗಲಿದ್ದು, 2024ರ ಸೆಪ್ಟೆಂಬರ್ 30ರವರೆಗೆ ಮಾತ್ರ ಹಾಲಿ ಇರುವ ಬಿ ಖಾ ಖಾತಾಗಳನ್ನು ಎಲ್ಲಾ ಕಾನೂನು ಉದ್ದೇಶಕ್ಕೆ ಅಧಿಕೃತ ಖಾತಾ ಎಂದು ಪರಿಗಣಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಈ ಮೂಲಕ ಬಿ ಖಾತಾಗಳಿಗಿದ್ದ ಬಿಬಿಎಂಪಿ ಪ್ಲಾನಿಂಗ್, ಒಸಿ, ಬ್ಯಾಂಕ್ ಲೋನ್ ಸೇರಿ ಹಲವು ಸಮಸ್ಯೆಗೆ ಮುಕ್ತಿ ಸಿಗಲಿದೆ.

ಪ್ರಮುಖವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ 5 ಪಾಲಿಕೆಗಳ ರಚನೆ, ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಸಂಪುಟ ಸಭೆ ತಾತ್ವಿಕ ಅನುಮೋದನೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read