ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ಈ ವರ್ಷ ವೈದ್ಯಕೀಯ ಕೋರ್ಸ್ ಶುಲ್ಕ ಹೆಚ್ಚಳ ಮಾಡದಿರಲು ನಿರ್ಧಾರ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಆಕಾಂಕ್ಷಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಈ ವರ್ಷ ಯಾವುದೇ ವೈದ್ಯಕೀಯ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡದಿರಲು ಸರ್ಕಾರ ನಿರ್ಧರಿಸಿದೆ.

ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳು ಈ ವರ್ಷ ಶೇಕಡ 15ರಷ್ಟು ಶುಲ್ಕ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು. ಗುರುವಾರ ವೈದ್ಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಕಾಲೇಜುಗಳ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ.

ಯಾವುದೇ ಕಾರಣಕ್ಕೂ ಈ ವರ್ಷ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ಆಡಳಿತ ಮಂಡಳಿ ಪ್ರತಿನಿಧಿಗಳಿಗೆ ಸಚಿವರು ಸ್ಪಷ್ಟವಾಗಿ ತಿಳಿಸಿದ್ದಾರೆ. ಕಳೆದ ವರ್ಷ ಖಾಸಗಿ ವೈದ್ಯಕೀಯ ಕಾಲೇಜು ವರ್ಷ ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿತ್ತು. ಈ ವರ್ಷ ಶುಲ್ಕ ಹೆಚ್ಚಳ ಮಾಡಲು ಸಾಧ್ಯವಿಲ್ಲ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read