HomeKarnatakaವಿಶೇಷ ಚೇತನರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ...

ವಿಶೇಷ ಚೇತನರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿನ ಐದು ಫಲಾನುಭವಿ ಆಧಾರಿತ ಯೋಜನೆಗಳಡಿ ವಿವಿಧ ಸೌಲಭ್ಯ ಪಡೆಯಲು ಜಿಲ್ಲೆಯ ವಿಕಲಚೇತನರಿಂದ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಬಳ್ಳಾರಿ   ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಅವರು ತಿಳಿಸಿದ್ದಾರೆ.

ಅರ್ಜಿಗಳನ್ನು ಸೇವಾಸಿಂಧು ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನವಾಗಿದೆ.

*ಯೋಜನೆಗಳು ಮತ್ತು ಬೇಕಾದ ದಾಖಲೆಗಳು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್ ಯೋಜನೆ: ಯುಡಿಐಡಿ ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಶಾಲಾ/ಕಾಲೇಜು ದೃಢೀಕರಣ ಪತ್ರ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ವಾಸಸ್ಥಳ ಪ್ರಮಾಣ ಪತ್ರ, ಪಡಿತರ ಚೀಟಿ, ಭಾವಚಿತ್ರ, ರೂ.20 ಬಾಂಡ್ನಲ್ಲಿ ನೀರಪೇಕ್ಷಣಾ ಪ್ರಮಾಣ ಪತ್ರ.

ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ: ಯುಡಿಐಡಿ ಕಾರ್ಡ್, ಚಾಲ್ತಿಯಲ್ಲಿರುವ ಎಲ್.ಎಲ್.ಆರ್./ಡಿ.ಎಲ್ ಪ್ರಮಾಣ ಪತ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ವಾಸಸ್ಥಳ ಪ್ರಮಾಣ ಪತ್ರ, ಪಡಿತರ ಚೀಟಿ, ಭಾವಚಿತ್ರ, ರೂ.20 ಬಾಂಡ್ನಲ್ಲಿ ನೀರಪೇಕ್ಷಣಾ ಪ್ರಮಾಣ ಪತ್ರ, ಕೆಲಸ/ಶೈಕ್ಷಣಿಕ ಪ್ರಮಾಣ ಪತ್ರ.

ಸಾಧನೆ ಸಲಕರಣೆ ಯೋಜನೆ: ಯುಡಿಐಡಿ ಕಾರ್ಡ್, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ವಾಸಸ್ಥಳ ಪ್ರಮಾಣ ಪತ್ರ, ಪಡಿತರ ಚೀಟಿ, ಭಾವಚಿತ್ರ.

ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ: ಯುಡಿಐಡಿ ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಶಾಲಾ/ಕಾಲೇಜು ದೃಢೀಕರಣ ಪತ್ರ, ಟೈಲರಿಂಗ್ ತರಬೇತಿ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ವಾಸಸ್ಥಳ ಪ್ರಮಾಣ ಪತ್ರ, ಪಡಿತರ ಚೀಟಿ, ಭಾವಚಿತ್ರ.

ದೃಷ್ಠಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ: ಯುಡಿಐಡಿ ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಶಾಲಾ/ಕಾಲೇಜು ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ.

ಮೇಲ್ಕಂಡ ಯೋಜನೆಗಳಿಗೆ ಸೇವಾಸಿಂಧು, ಗ್ರಾಮ ಒನ್, ಬಳ್ಳಾರಿ ಒನ್ ಮತ್ತು ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ, ಸ್ವೀಕೃತಿಯೊಂದಿಗೆ ಹಾರ್ಡ್ ಪ್ರತಿಯನ್ನು ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಗರದ ಎಸ್.ಪಿ.ಸರ್ಕಲ್ ಹತ್ತಿರ ದೇವಿನಗರದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಅಥವಾ ದೂ.08392267886 ಹಾಗೂ ಜಿಲ್ಲೆಯ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರ ದೂರವಾಣಿ ಸಂಪರ್ಕ: ಬಳ್ಳಾರಿ-8880875620, ಕಂಪ್ಲಿ-7676038917, ಕುರುಗೋಡು-9538000887, ಸಿರುಗುಪ್ಪ-9743509698, ಸಂಡೂರು-9632052270 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular