HomeKarnatakaGOOD NEWS : ಡಿಪ್ಲೋಮಾ, ಪದವೀಧರರಿಗೆ ಸಿಹಿಸುದ್ದಿ : ಜನವರಿಯಲ್ಲಿ ‘ಯುವನಿಧಿ’ ಯೋಜನೆ ಜಾರಿಗೆ

GOOD NEWS : ಡಿಪ್ಲೋಮಾ, ಪದವೀಧರರಿಗೆ ಸಿಹಿಸುದ್ದಿ : ಜನವರಿಯಲ್ಲಿ ‘ಯುವನಿಧಿ’ ಯೋಜನೆ ಜಾರಿಗೆ

ಬೆಂಗಳೂರು : ಡಿಪ್ಲೋಮಾ, ಪದವೀಧರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಜನವರಿಯಲ್ಲಿ ‘ಯುವನಿಧಿ’ ಯೋಜನೆ ಜಾರಿಗೊಳಿಸುವುದಾಗಿ ಸಿಎಂ ಹೇಳಿದ್ದಾರೆ.

ಇಂದು ಖಾಸಗಿ ಚಾನೆಲ್ ಆಯೋಜಿಸಿದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾವು ನುಡಿದಂತೆ ನಡೆಯುತ್ತೇವೆ. ಕಾಂಗ್ರೆಸ್ ನ 5 ನೇ ಗ್ಯಾರಂಟಿ ಯುವನಿಧಿ ಯೋಜನೆಯನ್ನು ಜನವರಿಯಲ್ಲಿ ಜಾರಿಗೊಳಿಸಲಿದ್ದೇವೆ ಎಂದು ಸಿಎಂ ಹೇಳಿದರು. ಈ ಮೂಲಕ ಪದವೀಧರರಿಗೆ ಸಿಎಂ ಗುಡ್ ನ್ಯೂಸ್ ನೀಡಿದ್ದಾರೆ.
ಜುಲೈ 1ರಂದು ಗೃಹಜ್ಯೋತಿ ಯೋಜನೆ ಜಾರಿ ಮಾಡಿದ್ದೇವೆ. ಆ.30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಿದ್ದೇವೆ. ಜೂನ್ 11ರಂದು ಶಕ್ತಿ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದೇವೆ. ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ.ದೇಶದಲ್ಲಿ ಇಷ್ಟು ದೊಡ್ಡ ಯೋಜನೆ ಯಾವ ರಾಜ್ಯವೂ ಜಾರಿ ಮಾಡಿಲ್ಲ ಎಂದರು.

ಯಾವುದೇ ಕಾರಣಕ್ಕೂ ರಾಜ್ಯ ದಿವಾಳಿಯಾಗುವುದಿಲ್ಲ. ಕರ್ನಾಟಕವನ್ನು ಅಭಿವೃದ್ಧಿ ರಾಜ್ಯ ಮಾಡುತ್ತೇವೆ. ನಾವು ನುಡಿದಂತೆ ನಡೆದಿದ್ದೇವೆ ಎಂದು ಸಿಎಂ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular